1 ಕೊರಿಂಥದವರಿಗೆ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ದುಸ್ರ್ಯಾಂಚ್ಯಾನ್ಕಿ ತಿಯಾ ಮೊಟೊ ಮನುನ್ ತುಕಾ ಕೊನ್ ಸಾಂಗ್ಲಾ? ತುಜಾಕ್ಡೆ ತಿಯಾ ಘೆಯ್ ನಸಲ್ಲೆ ತುಜೆಚ್ ಮಟಲ್ಲೆ ಕಾಯ್ ಹಾಯ್? ಅನಿ ತಿಯಾ ತೆ ದುಸ್ರ್ಯಾಕ್ನಾ ಘೆಟ್ಲೆಯ್ ಹೊಲ್ಯಾರ್ ತೆ ತುಜೆಚ್ ಸಾರ್ಕೆ ತಿಯಾ ಕಶ್ಯಾಕ್ ಬಡಾಯ್ ಬೊಲ್ತೆಯ್? ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.