Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂದರೆ, ಈ ಲೋಕದಲ್ಲಿರುವ ದುರಾಚಾರಿಗಳು, ಲೋಭಿಗಳು, ಸುಲಿಗೆಗಾರರು, ವಿಗ್ರಹಾರಾಧಕರು - ಇಂಥವರ ಸಹವಾಸವನ್ನು ಬಿಟ್ಟುಬಿಡಬೇಕೆಂಬುದು ನನ್ನ ಮಾತಿನ ಅರ್ಥವಲ್ಲ. ಹಾಗೆ ಮಾಡಿದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲುಕೊಳ್ಳುವವರು, ವಿಗ್ರಹಾರಾಧಕರು ಇವರ ಸಹವಾಸವನ್ನು ಬಿಟ್ಟುಬಿಡಬೇಕೆಂದು ನನ್ನ ತಾತ್ಪರ್ಯವಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಲೋಕದಲ್ಲಿರುವ ಎಲ್ಲಾ ಅನೈತಿಕರು, ಲೋಭಿಗಳು, ಸುಲಿಗೆ ಮಾಡುವವರು, ವಿಗ್ರಹಾರಾಧಕರು ಇಂಥವರ ಸಹವಾಸವನ್ನು ನೀವು ಬಿಟ್ಟು ಇರಬೇಕೆಂಬುದು ನನ್ನ ಅರ್ಥವಲ್ಲ. ಹಾಗಿದ್ದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ವಿಶ್ವಾಸ್ ನಸಲ್ಯಾಂಚ್ಯಾ ಮದ್ದಿ ಜಿವನ್ ಕರ್‍ತಲ್ಯಾ ತ್ಯಾ ಸಗ್ಳ್ಯಾ ವೆಭಿಚಾರ್ ಕರ್ತಲ್ಯಾಕ್ನಿ, ಹಾಸ್ಬುರ್ಕ್ಯಾಕ್ನಿ, ಲುಟ್‍ತಲ್ಯಾಕ್ನಿ, ನಾ ಹೊಲ್ಯಾರ್ ಮುರ್ತಿಚಿ ಪುಜಾ ಕರ್ತಲ್ಯಾಕ್ನಿ, ತುಮಿ ಸೊಡುನ್ ದಿವ್ಕ್ ಪಾಜೆ ಮನುನ್ ಸಾಂಗಲ್ಲೊ ನ್ಹಯ್; ತಸೆಜಾಲ್ಯಾರ್ ಹೊ ಜಗುಚ್ ಸೊಡುನ್ ಜಾತಲೆ ಪಡಿ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:10
18 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?


ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.


ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು