Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದುರಾಚಾರಿಗಳ ಸಹವಾಸ ನಿಮಗೆ ಸಲ್ಲದು, ಎಂದು ನಾನು ಬರೆದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಲೈಂಗಿಕ ಪಾಪ ಮಾಡುವ ಜನರ ಸಹವಾಸ ಮಾಡಕೂಡದೆಂದು ನಾನು ನನ್ನ ಪತ್ರದಲ್ಲಿ ನಿಮಗೆ ಬರೆದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನೈತಿಕರೊಡನೆ ಸಹವಾಸ ಮಾಡಬಾರದೆಂದು ನಾನು ಪತ್ರದಲ್ಲಿ ಬರೆದಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ತುಮ್ಕಾ ಲಿವಲ್ಲ್ಯಾ ಚಿಟಿತ್ ತುಮಿ ವೆಭಿಚಾರ್ ಕರ್‍ತಲ್ಯಾಂಚಿ ಸಂಗತ್ ಕರುಚೆ ನ್ಹಯ್ ಮನುನ್ ಮಿಯಾ ತುಮ್ಕಾ ಸಾಂಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:9
10 ತಿಳಿವುಗಳ ಹೋಲಿಕೆ  

ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?


ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.


ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.


ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು