Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮ್ಚ್ಯಾತ್ಲೆ ಉಲ್ಲೆ ಎಕ್ ಕಾಲಾತ್ ತಸೆಚ್ ಹೊತ್ತೆ; ಖರೆ ಅತ್ತಾ ತುಮ್ಕಾ ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ನಾಂವಾನ್ ಅನಿ ದೆವಾಚ್ಯಾ ಆತ್ಮ್ಯಾನ್ ಧುವ್ನ್ ಪವಿತ್ರ್ ಕರಲ್ಲೆ ಹಾಯ್, ಅಶೆ ಪವಿತ್ರ್ ಅನಿ ನಿತಿವಂತ್ ಲೊಕಾ ಕರಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:11
52 ತಿಳಿವುಗಳ ಹೋಲಿಕೆ  

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,


ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.


ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.


ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.


ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.


ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.


ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು