Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ನಮ್ಮನ್ನೂ ತನ್ನ ಪರಾಕ್ರಮದಿಂದ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ತಮ್ಮ ಶಕ್ತಿಯಿಂದ ನಮಗೆ ಕರ್ತ ಆಗಿರುವ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು ಮತ್ತು ನಮ್ಮನ್ನೂ ಎಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ದೆವಾನ್ ಧನಿಯಾಕ್ ಎವ್ಡೆಚ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುಕ್‍ ನಾ; ಖರೆ ತುಮ್ಕಾಬಿ ತೊ ಅಪ್ನಾಚ್ಯಾ ತಾಕ್ತಿನ್ ಉಟ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:14
16 ತಿಳಿವುಗಳ ಹೋಲಿಕೆ  

ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು