Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೂಳೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬದು ನಿಮಗೆ ತಿಳಿಯದೋ? ಗಂಡಹೆಂಡರಿಬ್ಬರು ಒಂದೇ ಶರೀರವಾಗಿರುವರೆಂದು ದೇವರು ಹೇಳುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ವೇಶ್ಯೆಯನ್ನು ಸೇರುವವನು ಅವಳೊಂದಿಗೆ ಒಂದೇ ದೇಹವಾಗುವನೆಂಬುದು ನಿಮಗೆ ತಿಳಿಯದೋ? “ಅವರಿಬ್ಬರೂ ಒಂದೇ ಶರೀರವಾಗಿರುವರು,” ಎಂದು ಹೇಳಲಾಗಿದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ವೆಭಿಚಾರ್ ಕರ್‍ತಲ್ಯಾ ಬಾಯ್ಕೊಮನ್ಸಿಕ್ನಾ ಎಕ್ ಹೊತಲೊ, ತಿಚ್ಯಾ ವಾಂಗ್ಡಾ ಎಕುಚ್ ಆಂಗ್ ಹೊತಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಪವಿತ್ರ್ ಪುಸ್ತಕಾತುಚ್ ಮಟಲ್ಲೆ ಹಾಯ್; “ತೆನಿ ದೊಗೆಬಿ ಎಕ್ ಆಂಗ್ ಹೊತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:16
11 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.


“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.


ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.


ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.


ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.


ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು