Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನ ಸಂಸರ್ಗದಲ್ಲಿರುವವನಾದರೋ ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಪ್ರಭುವಿನೊಂದಿಗೆ ಸಂಬಂಧವನ್ನು ಹೊಂದಿರುವಂಥವನು ಆತ್ಮದಲ್ಲಿ ಪ್ರಭುವಿನೊಂದಿಗೆ ಒಂದಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ಜೆ ಕೊನ್ ಧನಿಯಾಚ್ಯಾ ವಾಂಗ್ಡಾ ಎಕ್ ಹೊತಾ, ತೊ ತೆಚ್ಯಾ ವಾಂಗ್ಡಾ ಎಕ್ ಆತ್ಮೊ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:17
9 ತಿಳಿವುಗಳ ಹೋಲಿಕೆ  

ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.


ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.


ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು