Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಒಂದು ವೇಳೆ ಅಗಲಿದರೆ ಮತ್ತೆ ಮದುವೆಯಾಗದಿರಲಿ. ಇಲ್ಲವೆ, ತನ್ನ ಪತಿಯೊಂದಿಗೆ ಸಂಧಾನಮಾಡಿಕೊಳ್ಳಲಿ. ಅಂತೆಯೇ ಪತಿಯಾದವನು ತನ್ನ ಸತಿಯನ್ನು ಬಿಟ್ಟುಬಿಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಂದು ವೇಳೆ ಅಗಲಿದರೂ ಪುರುಷಸಹವಾಸವಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾಧಾನವಾಗಬೇಕು; ಮತ್ತು ಗಂಡನು ಹೆಂಡತಿಯನ್ನು ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸೊಡ್ಲ್ಯಾರ್ ತಿ ಲಗಿನ್ ಹೊಯ್‍ನಸ್ತಾನಾ ರ್‍ಹಾವ್ಚೆ, ನಾ ಹೊಲ್ಯಾರ್ ಅಪ್ನಾಚ್ಯಾ ಘೊವಾಕ್ಡೆ ರಾಜಿ ಹೊವ್ಚೆ. ತಸೆಚ್ ಘೊವಾನ್ಬಿ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ತರ್ ದಿವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:11
10 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.


ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.


ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.


“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.


ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು