Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಿಕ್ಕವರಿಗೆ ನಾನು ಹೇಳುವುದೇನೆಂದರೆ: ಇದು ನನ್ನ ಮಾತು, ಪ್ರಭುವಿನದಲ್ಲ: ಒಬ್ಬ ಸಹೋದರನಿಗೆ ಕ್ರೈಸ್ತವಿಶ್ವಾಸಿಯಲ್ಲದ ಸತಿ ಇದ್ದರೆ, ಆಕೆ ಅವನೊಡನೆ ದಾಂಪತ್ಯ ಜೀವನ ನಡೆಸಲು ಒಪ್ಪಿದರೆ, ಆಕೆಯನ್ನು ಬಿಟ್ಟುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ವಿುಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನನ್ನ ಅಭಿಪ್ರಾಯವೇನಂದರೆ - ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಒಗತನಮಾಡುವದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹುರಲ್ಲ್ಯಾಂಚ್ಯಾ ವಿಶಯಾತ್ ಧನಿ ನ್ಹಯ್ ಮಿಯಾ ಸಾಂಗ್ತಾ, ಖಲ್ಯಾಬಿ ಎಕ್ ಭಾವಾಕ್ ವಿಶ್ವಾಸಾತ್ ನಸಲ್ಲಿ ಬಾಯ್ಕೊ ರ್‍ಹಾಲ್ಯಾರ್ ಅನಿ ತೆಚ್ಯಾ ವಾಂಗ್ಡಾ ಜಿವನ್ ಕರುಕ್ ತಯಾರ್ ಹಾಯ್ ತರ್ ತಿಕಾ ಸೊಡ್ ಪತ್ತರ್ ದಿವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:12
8 ತಿಳಿವುಗಳ ಹೋಲಿಕೆ  

ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.


ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ.


ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.


ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.


ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.


ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು