Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ವಿಶ್ವಾಸಾತ್ ನಸಲ್ಲೊ ವಾಂಗ್ಡಿ ಸೊಡುನ್ ಜಾತಾ ಮನುನ್ ಮನ್ತಾ ಜಾಲ್ಯಾರ್, ತೊ ನಾ ತರ್ ತಿ ಜಾಂವ್ದಿತ್, ಅಸ್ಲ್ಯಾ ವಿಶಯಾತ್ ಎಕ್ ಭಾವಾಕ್ ನಾ ಹೊಲ್ಯಾರ್ ಭೆನಿಕ್ ಕಸ್ಲಿಬಿ ಜಬರ್ದಸ್ತಿ ನಾ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತುಮ್ಕಾ ಸಮಾದಾನಾನ್ ಜಿವನ್ ಕರುಕ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:15
11 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,


ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.


ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು