Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸುನ್ನತಿಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿಮಾಡಿಸಿಕೊಂಡದ್ದಕ್ಕಾಗಿ ಚಿಂತಿಸಬೇಕಾಗಿಲ್ಲ. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿ ಮಾಡಿಸಿಕೊಳ್ಳುವ ಅವಶ್ಯಕತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದನೋ ಅವನು ಸುನ್ನತಿ ಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸುನ್ನತಿ ಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿಯಿಲ್ಲದವನಂತೆ ಇರಬಾರದು. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿ ಮಾಡಿಸಿಕೊಳ್ಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸುನ್ನತ್ ಅಸಲ್ಲ್ಯಾಕ್ನಿ ದೆವಾನ್ ಬಲ್ವಲ್ಲೆ ಹಾಯ್ ಹೊಲ್ಯಾರ್, ಸುನ್ನತ್ ಕರಿನಸಲ್ಯಾ ಸಾರ್ಕೆ ತೆನಿ ರ್‍ಹಾವ್ಚೆ ನ್ಹಯ್, ಸುನ್ನತ್ ಘೆಯ್ನಾಸಲ್ಲ್ಯಾಕ್ನಿ ದೆವಾನ್ ಬಲ್ವಲ್ಲೆ ರ್‍ಹಾಲ್ಯಾರ್ ತೆನಿ ಅಪ್ನಾಕ್ ಸುನ್ನತ್ ಕರುನ್ ಘೆವ್ಕ್ ಜಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:18
8 ತಿಳಿವುಗಳ ಹೋಲಿಕೆ  

ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು