Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾವನು ಮತ್ತೊಬ್ಬನ ದಾಸನಾಗಿದ್ದು ಕರ್ತನ ಸೇವೆಗೆ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನು. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಶ್ಯಾಕ್ ಮಟ್ಲ್ಯಾರ್ ಕಶೆ ಧನಿಯಾಚೆ ಬಲ್ವನ್ ಗಾವ್ತಾನಾ ಸ್ವತಂತ್ರ್ ಅಸಲ್ಲೊ ತೊ ಕ್ರಿಸ್ತಾಚೊ ಗುಲಾಮ್ ಹೊತಾ ತಸೆಚ್ ಧನಿಯಾಚೆ ಬಲ್ವನ್ ಗಾವ್ತಾನಾ ಗುಲಾಮ್ ಹೊತ್ತೊ ಧನಿಯಾತ್ ಸ್ವತಂತ್ರ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:22
18 ತಿಳಿವುಗಳ ಹೋಲಿಕೆ  

ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.


ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.


ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು