Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮಾನವರಿಗೆ ದಾಸರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮನ್ನು ಕ್ರಯಕ್ಕೆ ಕೊಂಡುಕೊಳ್ಳಲಾಗಿದೆ. ಆದ್ದರಿಂದ ನೀವು ಮನುಷ್ಯರ ಗುಲಾಮರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮನುಷ್ಯರಿಗೆ ಗುಲಾಮರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮ್ಕಾ ಕಿಮ್ಮತ್ ದಿವ್ನ್ ಇಕಾತ್ ಘೆಟಲ್ಲೆ ಹಾಯ್ ತುಮಿ ಮಾನ್ಸಾಂಚೆ ಗುಲಾಮ್ ಹೊವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:23
10 ತಿಳಿವುಗಳ ಹೋಲಿಕೆ  

ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು