1 ಕೊರಿಂಥದವರಿಗೆ 7:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜಾಲ್ಯಾರ್ಬಿ ತಿಯಾ ಲಗಿನ್ ಕರುನ್ ಘೆತಲ್ಯಾತ್ ಕಾಯ್ ಪಾಪ್ ನಾ; ಖರೆ ಲಗಿನ್ ಹೊಲ್ಲ್ಯಾಕ್ನಿ ಹ್ಯಾ ಬಾಳ್ವಿಚೆ ಸದ್ದಿಚೆ ಕಸ್ಟ್ ಹಾತ್. ತೆ ಕಸ್ಟ್ ತುಮ್ಕಾ ಗಾವ್ತಲೆ ನಕ್ಕೊ ಮನ್ತಲಿ ಮಾಜಿ ಆಶಾ. ಅಧ್ಯಾಯವನ್ನು ನೋಡಿ |