Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಚ್ ಹ್ಯಾ ಜಗಾತ್ಲಿ ಸಾಮಾನಾ ವಾಪರ್‍ತಲ್ಯಾನಿ ತಿ ವಾಪ್ರಿನಸಲ್ಲ್ಯಾ ಸಾರ್ಕೆ ಜಿವನ್ ಕರುಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಭಾಯ್ಲೊ ರುಪ್ ನಾಪತ್ತೊ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:31
26 ತಿಳಿವುಗಳ ಹೋಲಿಕೆ  

ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.


ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.


ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,


ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ,


“ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು