1 ಕೊರಿಂಥದವರಿಗೆ 7:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ. ನಾನು ನಿಮಗೆ ಉರ್ಲು ಹಾಕಬೇಕೆಂದು ಇದನ್ನು ಹೇಳುವದಿಲ್ಲ, ನೀವು ಸಜ್ಜನರಿಗೆ ತಕ್ಕ ಹಾಗೆ ನಡೆದು ಭಿನ್ನಭಾವವಿಲ್ಲದೆ ಕರ್ತನಿಗೆ ಪಾದಸೇವೆಯನ್ನು ಮಾಡುವವರಾಗಬೇಕೆಂದು ನಿಮ್ಮ ಹಿತಕ್ಕೋಸ್ಕರವೇ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಿಮಗೆ ಸಹಾಯವಾಗಲೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನಾನು ನಿಮಗೆ ಬಂಧನ ಹಾಕಬೇಕೆಂದು ಇದನ್ನು ಹೇಳದೆ, ಗಮನ ಸೆಳೆಯದ ಭಕ್ತಿಯಿಂದ ಕರ್ತ ಯೇಸುವಿನ ಸೇವೆಯನ್ನು ಮಾಡುವವರಾಗಿ ನೀವು ಜೀವಿಸಬೇಕೆಂದು ನಿಮ್ಮ ಒಳ್ಳೆಯದಕ್ಕಾಗಿಯೇ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತುಮ್ಚ್ಯಾಚ್ ಬರ್‍ಯಾಕ್ ಮನುನ್ ಮಿಯಾ ಹೆ ಸಾಂಗ್ತಾ ತುಮ್ಕಾ ದಡ್ಪುನ್ ಧರುಚೆ ಮನುನ್ ಮಾಜೊ ಉದ್ದೆಸ್ ನ್ಹಯ್ ತುಮಿ ಬರ್‍ಯಾ ರಿತಿನ್ ಚಲುನ್ ಕಸ್ಲಿಬಿ ಅಡ್ಕಳ್ ನಸ್ತಾನಾ ಧನಿಯಾಚಿ ಸೆವಾ ಕರುಚಿ ಮನುನ್ ಮಾಜಿ ಆಶಾ. ಅಧ್ಯಾಯವನ್ನು ನೋಡಿ |