Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಒಬ್ಬನು ತನಗೆ ನಿಶ್ಚಿತವಾದ ಕನ್ಯೆಯೊಡನೆ ಅನುಚಿತ ರೀತಿಯಲ್ಲಿ ವರ್ತಿಸುತ್ತಿರಬಹುದು; ಅವನಿಗೆ ಸಂಯಮ ತಪ್ಪುವಂತಿದ್ದರೆ, ತಾನು ಆಶಿಸುವಂತೆ ಅವನು ಮದುವೆಮಾಡಿಕೊಳ್ಳಲಿ, ಅದು ಪಾಪವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದು ಹೋಗುತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ. ಅವನು ಪಾಪಮಾಡುವದಿಲ್ಲ, ಮದುವೆ ಮಾಡಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಿಲ್ಲವೆಂದು ಭಾವಿಸಿದರೆ, ಆಕೆಗೆ ಪ್ರಾಯ ಕಳೆದು ಹೋಗುತ್ತಿದ್ದರೆ, ಮದುವೆಯಾಗುವುದು ಅವಶ್ಯವೆಂದು ಅವನಿಗೆ ಕಂಡರೆ, ತನ್ನಿಷ್ಟದಂತೆ ಮಾಡಲಿ. ಇದರಿಂದ ಅವನು ಪಾಪಮಾಡುವುದಿಲ್ಲ, ಮದುವೆ ಮಾಡಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಕೊನ್‍ ತರ್ ಎಕ್ಲೊ ಗೊಸ್ಟ್ ಹೊಲ್ಲ್ಯಾ ಚೆಡ್ವಾಚ್ಯಾ ವಿಶಯಾತ್ ಅಪ್ನಿ ಕರುಕ್ ಲಾಗ್ಲಾ ತೆ ಸಮಾ ನ್ಹಯ್ ಮನುನ್ ಚಿಂತ್ತಾ, ಖರೆ ತಿಚೆ ವೈರುಚ್ ಲೈ ಮನ್ ರಾಲ್ಯಾರ್ ತೊ ಅಪ್ನಾಕ್ ಕಾಯ್ ಬರೆ ದಿಸ್ತಾ ತೆ ಕರುಂದಿತ್, ತೆನಿ ಲಗಿನ್ ಕರುನ್ ಘೆತಲ್ಯಾತ್ ಕಾಯ್ಬಿ ಚುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:36
7 ತಿಳಿವುಗಳ ಹೋಲಿಕೆ  

ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.


ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.


ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.


ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.


ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.


ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.


ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು