Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಂಥಿಂಥದನ್ನು ತಿಳುಕೊಂಡಿದ್ದೇನೆಂದು ನೆನಸಿದವನು ತಾನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕೊನ್ ಎಕ್ಲೊ ಅಪ್ನಾಕ್ ಕಾಯ್ಬಿ ಉಲ್ಲೆ ಗೊತ್ತ್ ಹಾಯ್ ಮನುನ್ ಚಿಂತಾ ಜಾಲ್ಯಾರ್ ತೆಕಾ ಜೆ ಕಾಯ್ ಗೊತ್ತ್ ಹಾಯ್ ತೆ ಕಳ್ವುನ್ ಘೆಟಲ್ಲ್ಯಾ ಸರ್ಕೆ ಕಳ್ವುನ್ ಘೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:2
9 ತಿಳಿವುಗಳ ಹೋಲಿಕೆ  

ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು