Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದೇ ಪ್ರಕಾರ ಶುಭಸಂದೇಶ ಪ್ರಚಾರಕರು ಶುಭಸಂದೇಶ ಪ್ರಚಾರದ ಆದಾಯದಿಂದಲೇ ಜೀವನ ನಡೆಸಬೇಕೆಂದು ಪ್ರಭುವೇ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಚ್ ಬರಿ ಖಬರ್ ಪ್ರಚಾರ್ ಕರ್ತಲ್ಯಾಕ್ನಿ ಬರ್‍ಯಾ ಖಬ್ರೆ ವೈನಾಚ್ ಜಿವನ್ ಕರುಕ್ ಪಾಜೆ ಮನುನ್ ಧನಿಯಾನುಚ್ ಹುಕುಮ್ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:14
13 ತಿಳಿವುಗಳ ಹೋಲಿಕೆ  

ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?


ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.


ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.


ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.


ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.


ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?


ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!


ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು