Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕ್ರೈಸ್ತ ಸಹೋದರಿಯಾಗಿರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ವಿುಕ್ಕಾದ ಅಪೊಸ್ತಲರಂತೆಯೂ ಕರ್ತನ ತಮ್ಮಂದಿರಂತೆಯೂ ಕೇಫನಂತೆಯೂ ನಮಗೆ ಹಕ್ಕಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹುರಲ್ಲ್ಯಾ ಅಪೊಸ್ತಲಾನಿ, ಧನಿಯಾಚ್ಯಾ ಭಾವಾನಿ ಅನಿ ಕೆಫಾಸಾನ್ ಕರಲ್ಲ್ಯಾ ಸಾರ್ಕೆ ಎಕ್ ಕ್ರಿಸ್ತ್ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊಕ್‍ ಲಗಿನ್ ಹೊವ್ನ್ ಅಮ್ಚ್ಯಾ ವಾಂಗ್ಡಾ ಘೆವ್ನ್ ಜಾವ್ಕ್ ಅಮ್ಕಾ ಹಕ್ಕ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:5
25 ತಿಳಿವುಗಳ ಹೋಲಿಕೆ  

ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)


ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.


ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.


ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.


ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.


ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.


ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.


ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;


ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.


ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,


ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.


ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.


ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?


ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.


ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.


ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು.


ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು