Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ವೆಭಿಚಾರ್ ಕರ್ತಲ್ಯಾಕ್ನಿ, ನಿತಿನ್ ರ್‍ಹಾಯ್ ನಸಲ್ಯಾಕ್ನಿ , ಘೊಮನ್ಸಾ-ಘೊಮನ್ಸಾ, ಬಾಯ್ಕಾ-ಬಾಯ್ಕಾ ಎಕಾಮೆಕಾಕ್ನಾ ನಿಜುನ್ ಪಾಪ್ ಕರ್‍ತಲ್ಯಾಂಚ್ಯಾಸಾಟ್ನಿ,ಝುಟೆ ಅನಿ ಝುಟಿ ಸಾಕ್ಷಿ ಸಾಂಗ್ತಲೆ ಅನಿ ಬರ್‍ಯಾ ಖಾಯ್ದ್ಯಾಂಚ್ಯಾ ವಿರೊದ್ ಸಾಂಗ್ತಲೆ ರ್‍ಹಾತ್ಯಾತ್ ತೆಂಕಾ ದಿವ್ನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:10
34 ತಿಳಿವುಗಳ ಹೋಲಿಕೆ  

“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.


ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.


ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.


ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.


ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.


ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು