1 ತಿಮೊಥೆಯನಿಗೆ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜೆಜು ಕ್ರಿಸ್ತ್ ಹ್ಯಾ ಜಗಾತ್ ಪಾಪಿ ಲೊಕಾಕ್ನಿ ಬಚಾವ್ ಕರುಕ್ ಮನುನ್ ಯೆಲ್ಲೊ ಮನ್ತಲಿ ಗೊಸ್ಟ್ ಖರಿ ಅನಿ ಹೆ ಸಗ್ಳ್ಯಾ ರಿತಿನ್ ವಿಶ್ವಾಸ್ ಕರುಕುಚ್ ಪಾಜೆ: ಸಗ್ಳ್ಯಾಂಚ್ಯಾನಿಕಿ ಬುರ್ಸೊ ಪಾಪಿ ಮಿಯಾ. ಅಧ್ಯಾಯವನ್ನು ನೋಡಿ |