1 ತಿಮೊಥೆಯನಿಗೆ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳನ್ನು ನಾನು ನೆನಸಿ - ನೀನು ಅವುಗಳಿಂದ ಧೈರ್ಯಗೊಂಡು ಕ್ರೈಸ್ತರ ದಿವ್ಯಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪನೆಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ನಾನು ನಿನಗೆ ಆಜ್ಞಾಪಿಸುವುದೇನೆಂದರೆ, ಮೊದಲು ನಿನ್ನ ವಿಷಯದಲ್ಲಿ ತಿಳಿಸಲಾದ ಪ್ರವಾದನೆಗಳಿಗೆ ಅನುಗುಣವಾಗಿ ನಂಬಿಕೆಯ ದಿವ್ಯ ಹೋರಾಟವನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಿಮೊತಿ ಮಾಜ್ಯಾ ಲೆಕಾ, ಫಾಟಿ ತಿಯಾ ಬರಿ ಖಬರ್ ಲೊಕಾಕ್ನಿ ಶಿಕ್ವಲ್ಲ್ಯಾ ಗೊಸ್ಟಿಯಾಂಚ್ಯಾ ಪರ್‍ಕಾರ್ ಮಿಯಾ ತುಕಾ ಸಾಂಗ್ತಾ. ಬರೆ ಕರುನ್ ಲಡಾಯ್ ಕರುಕ್ ಮನುನ್ ಹೊತ್ತ್ಯಾ ಹತಿಯಾರಾಂಚ್ಯಾ ಬಾಸೆನ್ ತ್ಯಾ ಗೊಸ್ಟಿಯಾ ತಿಯಾ ವಾಪರ್, ಅಧ್ಯಾಯವನ್ನು ನೋಡಿ |