Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ಮೆಸಿದೊನಿಯಾಕ್ ಜಾತಾನಾ ತಿಯಾ ಎಫೆಜಾತುಚ್ ರ್‍ಹಾ ಮನುನ್ ಮಿಯಾ ತುಕಾ ಮಾಗುನ್ ಘೆಟಲ್ಲೊ, ಉಲ್ಲಿ ಲೊಕಾ ಥೈ ಚುಕ್ ಶಿಕಾಪಾ ಲೊಕಾಕ್ನಿ ಶಿಕ್ವುಲ್ಯಾತ್ ತೆಂಕಾ ತೆ ಶಿಕಾಪ್ ಬಂದ್ ಕರಾ ಮನುನ್ ತಿಯಾ ಹುಕುಮ್ ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:3
24 ತಿಳಿವುಗಳ ಹೋಲಿಕೆ  

ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,


ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.


ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.


ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು