Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಧರ್ಮೋಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲಿ ತಾವು ದೃಢವಾಗಿ ಮಾತಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಂಚ್ಯಾ ದೆವಾಚ್ಯಾ ನೆಮಾಂಚಿ ಮಾಸ್ತರಾ ಹೊತಲಿ ಆಶಾ ಹಾಯ್ ಅನಿ ತೆನಿ ಮಾಸ್ತರಾ ಹೊವ್ಕ್ ಬಿ ಬಗ್ತ್ಯಾತ್ , ಖರೆ ತೆನಿ ಅಪ್ನಿ ಗೊಸ್ಟಿಯಾ ಅಪ್ನಿಚ್ ಸಮ್ಜುನ್ ಘೆಯ್‌ನ್ಯಾತ್, ನಾ ತರ್ ಖಲ್ಯಾ ವಿಶಯಾಸಾಟ್ನಿ ತೆನಿ ಮೊಟ್ಯಾ ವಿಶ್ವಾಸಾನ್ ಸಾಂಗುನ್ ಘೆತಾತ್ ತೆ ಬಿ ತೆನಿ ಸಮ್ಜುನ್ ಘೆಯ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:7
20 ತಿಳಿವುಗಳ ಹೋಲಿಕೆ  

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.


ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.


ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?


ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು