Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಹಿಳೆಯರು ಮೌನದಿಂದಲೂ ನಮ್ರತೆಯಿಂದಲೂ ಧರ್ಮೋಪದೇಶವನ್ನು ಕಲಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸ್ತ್ರೀಯರು ಮೌನವಾಗಿದ್ದು ಪೂರ್ಣವಿಧೇಯರಾಗಿ ಉಪದೇಶವನ್ನು ಕೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸ್ತ್ರೀಯರು ಉಪದೇಶವನ್ನು ಕೇಳಬೇಕು ಮತ್ತು ವಿಧೇಯರಾಗಲು ಪೂರ್ಣಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸ್ತ್ರೀಯು ಮೌನವಾಗಿದ್ದು ಎಲ್ಲಾ ಅಧೀನತೆಯನ್ನು ಕಲಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಬಾಯ್ಕೊಮನ್ಸಾನಿ ಗಪ್‍ ರ್‍ಹಾವ್ನ್ ಖಾಲ್ತಿ ಹೊವ್ನ್ ಸಗ್ಳೆ ಸಿಕುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:11
10 ತಿಳಿವುಗಳ ಹೋಲಿಕೆ  

ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.


ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.


ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.


ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.


ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.


ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು