Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಹೆಚ್ಯಾಚ್ ಸಾಟ್ನಿ ವಿಶ್ವಾಸಾಚಿ ಬರಿ ಖಬರ್ ಅನಿ ಖರೆಪಾನಾಚ್ಯಾ ವಿಶಯಾತ್ ಸಾಂಗುಕ್ ಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತೆಂಕಾ ಸಿಕ್ವುತಲೊ ಅನಿ ಎಕ್ ಅಪೊಸ್ತಲ್ ಕರುನ್ ಮಾಕಾ ಧಾಡಲ್ಲೆ ಹಾಯ್. ಮಿಯಾ ಝುಟೆ ಸಾಂಗಿನಾ ಹೊಲಾ; ಜೆ ಕಾಯ್ ಖರೆ ಹಾಯ್ ತೆಚ್ ಮಿಯಾ ಸಾಂಗುಕ್ ಲಾಗ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:7
27 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.


ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.


ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.


ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.


ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.


ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.


ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.


ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?


ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.


ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.


ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು