1 ತಿಮೊಥೆಯನಿಗೆ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು; ಚಾಡಿ ಹೇಳುವವರಾಗಿರದೆ ಮದ್ಯಾಸಕ್ತಿಯಿಲ್ಲದವರಾಗಿಯೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತಸೆಚ್ ಸೆವಕಿಯಾ ಹೊವ್ನ್ ಹೊತ್ತಿ ತೆಂಚ್ಯಾ ಬಾಯ್ಕಾಬಿ ಬರ್‍ಯಾ ಗುನಾಚಿ ರ್‍ಹಾವ್ಚಿ ದುಸ್ರ್ಯಾಂಚಿ ಖಬ್ರಿಯಾ ಬೊಲ್ತಲಿ ರ್‍ಹಾವ್ಚೆ ನ್ಹಯ್; ತೆನಿ ಸಗ್ಳ್ಯಾತ್ ಬರ್‍ಯಾ ಮನಾಚೆ ಅನಿ ಮರ್ಯಾದಿಚೆ ಹೊವ್ನ್ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;