Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಷ್ಠೆಯಿಂದ ಸೇವೆಸಲ್ಲಿಸುವ ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆ: ಕ್ರಿಸ್ತಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನು ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋಗ್ಯ ಮಾರ್ಗದಲ್ಲಿ ಸೇವೆ ಮಾಡುವ ಜನರು ತಮಗೆ ಗೌರವಯುತವಾದ ಸ್ಥಾನವನ್ನು ಪಡೆಯುವರು. ಕ್ರಿಸ್ತ ಯೇಸುವಿನಲ್ಲಿ ತಮಗಿರುವ ನಂಬಿಕೆಯ ವಿಷಯದಲ್ಲಿ ಅವರು ಭರವಸೆ ಉಳ್ಳವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಭಾ ಹಿರಿಯರಾಗಿ ಚೆನ್ನಾಗಿ ಸೇವೆ ಮಾಡಿದವರು ತಮಗೆ ಒಳ್ಳೆಯ ಸ್ಥಿತಿಯನ್ನೂ, ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸದಲ್ಲಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಾಂಡ್ಯಾತ್ ಅಪ್ನಾಚೆ ಕಾಮ್ ಬರೆ ಕರುನ್ ಕರ್‍ತಲಿ ಸೆವಕಾ ಅಪ್ನಾಸಾಟ್ನಿ ಎಕ್ ಬರೊ ಜಾಗೊ ಕಮ್ವುನ್ ಘೆತಾತ್, ಅನಿ ಜೆಜು ಕ್ರಿಸ್ತಾಚ್ಯಾ ವರ್‍ತಿ ತೆಂಕಾ ಹೊತ್ತ್ಯಾ ವಿಶ್ವಾಸಾಚ್ಯಾ ವಿಶಯಾತ್ ಘಟ್ ಮನಾನ್ ಸಾಂಗುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:13
17 ತಿಳಿವುಗಳ ಹೋಲಿಕೆ  

ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.


ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.


ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.


ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.


ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.


ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು