Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:16
81 ತಿಳಿವುಗಳ ಹೋಲಿಕೆ  

ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.


ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ.


ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.


ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.


ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.


ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.


ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)


ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.


ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.


ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.


“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು