Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಹೊವ್ನ್ ತಾಂಡ್ಯಾತ್ ಸೆವಾ ಕರ್‍ತಲ್ಯಾ ಲೊಕಾಂಚೊ ಸ್ವಬಾವ್ ಬರೊ ರ್‍ಹಾವ್ಚೊ ಅನಿ ತೆನಿ ಮಾನ್ ಮರ್ಯಾದಿನ್ ರ್‍ಹಾವ್ಚೆ;ತೆನಿ ಗೊಸ್ಟಿಯಾಕ್ನಿ ವಿಶ್ವಾಸ್ ಥವ್ತಲೆ ಹೊವ್ನ್ ರ್‍ಹಾವ್ಚೆ, ಲೈ ಫಿತಲೆ ನಾಹೊಲ್ಯಾರ್ ಲೈ ಪೈಸ್ಯಾಂಚಿ ಆಶಾ ಕರುಚೆ ನ್ಹಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:8
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.


ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,


ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.


ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.


ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.


ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು