Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಜ್ಯಾ ಭುತ್ತುರ್ ಹೊತ್ತ್ಯಾ ತಾಂಡ್ಯಾಚ್ಯಾ ವ್ಹಡಿಲಾನಿ, ಅನಿ ಪ್ರವಾದ್ಯಾನಿ ತುಜ್ಯಾ ವರ್‍ತಿ ಹಾತ್ ಥವ್ನ್ ದಿಲ್ಲ್ಯಾ ಆತ್ಮಿಕ್ ರಿತಿಚ್ಯಾ ದೆನ್ಗಿಚಿ ಪರ್ವಾ ಕರಿನಸ್ತಾನಾ ರ್‍ಹಾವ್‍ನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:14
18 ತಿಳಿವುಗಳ ಹೋಲಿಕೆ  

ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.


ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಪವಿತ್ರಾತ್ಮನನ್ನು ನಂದಿಸಬೇಡಿ,


ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.


ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.


ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.


ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.


ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.


ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು