Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಮನುನ್ ಮಿಯಾ ಮನ್ತಾ, ದಾಂಡ್ಗ್ಯಾ ಘೊಮರಲ್ಲ್ಯಾ ಬಾಯ್ಕಾಮನ್ಸಾನಿ ಲಗಿನ್ ಕರುನ್ ಘೆವ್ಚೆ ಅನಿ ಪೊರಾಕ್ನಿ ಜಲ್ಮಾಕ್ ಹಾನುನ್ ತೆಂಚಿ ಉಳ್ಗಿ ಕರುಚೆ ಅನಿ ಘರ್‍ದಾರ್ ಬಗುನ್ ಘೆವ್ನ್ ರ್‍ಹಾವ್ಚೆ, ಅಶೆ ಲೊಕಾನಿ ಅಮ್ಚ್ಯಾ ವಿರೊದ್ ಕಾಯ್ಬಿ ಬುರ್ಶೆ ಬೊಲುಕ್ ವಾಟ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:14
19 ತಿಳಿವುಗಳ ಹೋಲಿಕೆ  

ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.


ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.


ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.


ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.


ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.


ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.


ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.


ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು