Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ’ ಎಂದೂ, ‘ಕಾರ್ಮಿಕನು ಕೂಲಿಗೆ ಅರ್ಹನು’ ಎಂದೂ ಧರ್ಮಶಾಸ್ತ್ರ ಹೇಳುತ್ತದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಶಾಸ್ತ್ರದಲ್ಲಿ ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು” ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!” ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಪವಿತ್ರ್ ಪುಸ್ತಕ್ ಮನ್ತಾ “ತುಮ್ಚೆ ಭಾತ್ ಮಳ್ತಾನಾ ಬೈಲಾಚೆ ತೊಂಡ್ ಮುಸ್ಕೆ ಘಾಲುನ್ ಭಾಂದುನಕಾಸಿ” ಅನಿ ರಾಬಲ್ಲ್ಯಾಕ್ ತೆಚಿ ಮಜುರಿ ಗಾವುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:18
13 ತಿಳಿವುಗಳ ಹೋಲಿಕೆ  

ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.


ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.


ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.


ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.


“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.


ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು