Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆ ಕೊನ್ ಪಾಪ್ ಕರ್‍ತಾತ್ ತೆಂಕಾ ಲೊಕಾತ್ನಿಚ್ ಜೊರ್ ಕರ್, ಅಶೆ ಅನಿ ಹುರಲ್ಲ್ಯಾ ಲೊಕಾಕ್ನಿಬಿ ಉಲ್ಲೆ ಭಿಂಯೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:20
15 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,


ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.


ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.


ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.


ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.


“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು