Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ನೀನು ಸುವಾರ್ತೆಯ ವಿಧಿಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಕಾ ದಿಲ್ಲಿ ಹುಕುಮಾ ಅಮ್ಚೊ ಧನಿ ಜೆಜು ಕ್ರಿಸ್ತ್ ದಿಸ್ತಲ್ಲ್ಯಾ ದಿಸಾ ಪತರ್ ವಿಶ್ವಾಸಾನ್ ಪಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:14
28 ತಿಳಿವುಗಳ ಹೋಲಿಕೆ  

ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,


ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು