1 ತಿಮೊಥೆಯನಿಗೆ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ ತಮ್ಮ ಸೇವೆಯ ಫಲವನ್ನು ಹೊಂದುವವರು ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ. ಅಧ್ಯಾಯವನ್ನು ನೋಡಿ |