Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್, ಅಮಿ ತುಮ್ಚ್ಯಾಕ್ಡೆ ಘೆವ್ನ್ ಯೆಲ್ಲಿ ಬರಿ ಖಬರ್ ಫಕತ್ ಗೊಸ್ಟಿಯಾನಿ ಎವ್ಡೆಚ್ ನ್ಹಯ್, ಬಳಾನ್, ಅನಿ ಪವಿತ್ರ್ ಆತ್ಮ್ಯಾನ್ ಭರಲ್ಲಿ ಹೊತ್ತಿ, ಅನಿ ತ್ಯಾತುರ್ ಹೊತ್ತ್ಯಾ ಖರೆಪಾನಾಚ್ಯಾ ಸಮೆತ್ ಅಮಿ ಘೆವ್ನ್ ಯೆಲ್ಲಾಂವ್. ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಅಮಿ ಕಶೆ ಹೊತ್ತಾಂವ್ ಮನುನ್ ತುಮ್ಕಾಚ್ ಗೊತ್ತ್ ಹಾಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:5
60 ತಿಳಿವುಗಳ ಹೋಲಿಕೆ  

ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.


ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.


ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.


ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.


ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು