Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿ ಸಗ್ಳಿ ಲೊಕಾ, ಅಮಿ ತುಮ್ಚೆಕ್ಡೆ ಯೆಲ್ಲ್ಯಾ ತನ್ನಾ ತುಮಿ ಕಶೆ ಅಮ್ಕಾ ಸ್ವಿಕಾರ್ ಕರ್ಲ್ಯಾಸಿ, ಅನಿ ಮುರ್ತಿಚ್ಯಾ ಪುಜ್ಯಾತ್ನಾ ಖರ್‍ಯಾ ಝಿತ್ತ್ಯಾ ದೆವಾಚಿ ಸೆವಾ ಕರುಕ್ ದೆವಾಕ್ಡೆ ಕಶೆ ಪರತ್ಲ್ಯಾಶಿ ಮನುನ್ ಅಪ್ನಿಚ್ ಸಾಂಗುಕ್ ಲಾಗಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:9
30 ತಿಳಿವುಗಳ ಹೋಲಿಕೆ  

ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು