Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆಂದು ನಾವೆಂದೂ ಪ್ರಯತ್ನಿಸಿಲ್ಲವೆಂಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊಂಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆಂಬುದು ದೇವರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಝುಟ್ಯಾ ಗೊಸ್ಟಿಯಾನಿ ಮಳ್ಳ್ ಕರುಕ್, ನಾ ಹೊಲ್ಯಾರ್, ಪೈಸ್ಯಾಂಚಿ ಆಶಾ ಕರುನ್ ನಾಟಕ್ ಕರುನ್ ದಾಕ್ವುಕ್ ಮನುನ್ ಯೆಲ್ಲೆ ನಾವ್, ದೆವುಚ್ ಹೆಕಾ ಸಗ್ಳ್ಯಾಕ್ ಸಾಕ್ಷಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:5
34 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.


ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.


ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು