Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ನಮಗೆ ಅತಿ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ಪ್ರಾಣವನ್ನೇ ಕೊಡುವದಕ್ಕೆ ಸಂತೋಷಿಸುವವರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮನ್ನು ಬಹಳವಾಗಿ ಪ್ರೀತಿಸಿದೆವು. ಆದುದರಿಂದ ದೇವರ ಸುವಾರ್ತೆಯನ್ನು ನಿಮ್ಮೊಡನೆ ಹಂಚಿಕೊಳ್ಳಲು, ಮಾತ್ರವೇ ಅಲ್ಲ, ನಿಮಗೋಸ್ಕರ ಸ್ವಂತ ಪ್ರಾಣವನ್ನೇ ಕೊಡಲು ಸಿದ್ಧರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಅಮಿ ತುಮ್ಕಾ ಲೈ ಪ್ರೆಮ್ ಕರ್ತಾಂವ್, ತೆಚ್ಯಾಸಾಟ್ನಿಚ್, ಖಾಲಿ ದೆವಾಚಿ ಬರಿ ಖಬರ್ ಎವ್ಡಿಚ್ ನ್ಹಯ್, ಅಮ್ಚೆ ಜಿವನ್ ಸೈತ್ ತುಮ್ಚ್ಯಾಕ್ಡೆ ಅಮಿ ವಾಟುನ್ ಘೆಟ್ಲಾಂವ್. ತುಮಿ ಅಮ್ಕಾ ಲೈ ಪ್ರೆಮಾಚಿ ಲೊಕಾ!.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:8
23 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.


ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.


ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು