Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವದಕ್ಕೂ ನಮಗೆ ಅನುಕೂಲವಾಗಬೇಕೆಂದು ನಾವು ಹಗಲಿರುಳು ದೇವರನ್ನು ಅತ್ಯಂತವಾಗಿ ಬೇಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ನಂಬಿಕೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಪರ್‍ತುನ್ ತುಮ್ಚೆ ತೊಂಡ್ ಬಗುಕ್ ಅನಿ ತುಮ್ಚ್ಯಾ ವಿಶ್ವಾಸಾಕ್ ಅನಿ ಕಾಯ್ಬಿ ಭರ್‍ತಿ ಕರ್‍ತಲೆ ರ್‍ಹಾಲ್ಯಾರ್ ತುಮ್ಕಾ ಆದಾರ್ ದಿ ಸಾರ್ಕೆ ಹೊವ್ಕ್ ದೆವ್ ಅಮ್ಕಾ ಅವ್ಕಾಸ್ ಕರುನ್ ದಿಂವ್ದಿತ್ ಮನುನ್ ಅಮಿ ತೆಚೆ ಕಡೆ ದಿಸ್‍-ರಾತ್ ಅನಿ ಉಲ್ಲೆ ಉಮ್ಮೆದಿನ್ ಮಾಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:10
19 ತಿಳಿವುಗಳ ಹೋಲಿಕೆ  

ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.


ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.


ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.


ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.


ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು