Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕ್ರಿಸ್ತಾಚಿ ಬರಿ ಖಬರ್ ಸಾಂಗ್ತಲ್ಯಾ ದೆವಾಚ್ಯಾ ಕಾಮಾತ್ ಅಮ್ಚೊ ವಾಂಗ್ಡಿ ಹೊವ್ನ್ ಅಸಲ್ಲ್ಯಾ ಅಮ್ಚ್ಯಾ ಭಾವಾಕ್ ತಿಮೊತಿಕ್, ತುಮ್ಕಾ ಘಟ್ ಕರುಕ್ ಅನಿ ವಿಶ್ವಾಸಾತ್ ಉಮ್ಮೆದಿನ್ ಭರಿ ಸಾರ್ಕೆ ಕರುಕ್ ಮನುನ್ ಅಮಿ ಧಾಡುನ್ ದಿಲ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:2
24 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.


ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.


ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ


ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.


ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,


ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.


ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.


ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.


ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.


ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು