Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ನಿವಿುತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಕ್ಕಾಗಿ ದೇವರಿಗೆ ತಕ್ಕಷ್ಟು ಸ್ತೋತ್ರಮಾಡುವದು ನಮ್ಮಿಂದ ಹೇಗಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ನಿಮಿತ್ತದಿಂದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನಂದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಆನಂದಕ್ಕೆ ಬದಲಾಗಿ ದೇವರಿಗೆ ಹೇಗೆ ಸಾಕಷ್ಟು ಕೃತಜ್ಞತೆಯನ್ನು ಸಲ್ಲಿಸಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ತುಮ್ಕಾ ಲಾಗುನ್ ದೆವಾಚ್ಯಾ ಇದ್ರಾಕ್ ಅಮ್ಕಾ ಕವ್ಡಿಕಿ ಕುಶಿ ಹೊವ್ಕ್ ಲಾಗ್ಲಾ, ಹೆಚ್ಯಾಸಾಟ್ನಿ ಅಮಿ ದೆವಾಕ್ ಕವ್ಡ್ಯಾ ಮಾಪಾನ್ ಧನ್ಯವಾದ್ ದಿಲ್ಯಾರ್‍ಬಿ ಕಮಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:9
17 ತಿಳಿವುಗಳ ಹೋಲಿಕೆ  

ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.


ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.


ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.


ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಆನಂದಧ್ವನಿಮಾಡಲಿ.


ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?


ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು