Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕಾಯ್ ಅಮಿ ತುಮ್ಕಾ ಶಿಕ್ವುಲಾಂವ್ ತೆ ಧನಿಯಾಚೆಚ್ ಶಿಕಾಪ್, ಧನಿ ಯೆತಲ್ಯಾ ದಿಸಿ ಝಿತ್ತೆ ಹೊತ್ತೆ ಅಮಿ, ಅತ್ತಾ ಮರುನ್ ಗೆಲ್ಲ್ಯಾ ಲೊಕಾಂಚ್ಯಾ ಫಿಡೆ ಜಾಯ್ನಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:15
19 ತಿಳಿವುಗಳ ಹೋಲಿಕೆ  

ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.


ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.


ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.


ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು


ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.


ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.


ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.


ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.


ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು