Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಹೆಚ್ಯಾ ವಿಶಯಾತ್ ಕೊನ್‍ಬಿ ಅನಿಎಕ್ಲ್ಯಾ ಕ್ರಿಸ್ತಾತ್ ಭಾವ್ ಹೊಲ್ಲ್ಯಾ ಎಕ್ಲ್ಯಾಕ್ ಮೊಸ್ ಕರುನ್ ತೆಚೊ ಫಾಯ್ದೊ ಕಾಡುನ್ ಘೆವ್ಚೆ ನ್ಹಯ್. ಹೆಚ್ಯಾ ವಿಶಯಾತ್ ಅದ್ದಿಚ್ ಅಮಿ ತುಮ್ಕಾ ಸಾಂಗ್ಲಾಂವ್ ಅನಿ ಅಶೆ ಕರ್ತಲ್ಯಾಕ್ನಿ ಧನಿ ಮೊಟಿ ಶಿಕ್ಷಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:6
50 ತಿಳಿವುಗಳ ಹೋಲಿಕೆ  

ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”


ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,


ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.


ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.


ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.


ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!


ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.


ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.


ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.


ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.


“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.


“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.


ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,


“ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು