Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಲಕ್ಷಿಸಿ ಅವರ ಕೆಲಸದ ನಿವಿುತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ನಿಮ್ಮಲ್ಲಿ ಮಾಡುವ ಸೇವೆಗಾಗಿ ಅವರನ್ನು ವಿಶೇಷವಾದ ಪ್ರೀತಿಯಿಂದ ಗೌರವಿಸಿರಿ. ನೀವೆಲ್ಲರೂ ಸಮಾಧಾನದಿಂದ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಕರ್‍ತಲ್ಯಾ ಹ್ಯಾ ಸೆವೆಸಾಟ್ನಿ ತೆಂಕಾ ಮೊಟ್ಯಾ ರಿತಿಚೊ ಗೌರವ್ ಅನಿ ಪ್ರೆಮ್ ದಾಕ್ವಾ. ತುಮಿ ಎಕಾಮೆಕಾ ಮದ್ದಿ ಸಮಾದಾನಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:13
21 ತಿಳಿವುಗಳ ಹೋಲಿಕೆ  

ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.


ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.


“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.


ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು