1 ಥೆಸಲೋನಿಕದವರಿಗೆ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅಮ್ಕಾ ಸಮಾದಾನ್ ದಿತಲೊ ದೆವ್ ತುಮ್ಕಾ ಸಗ್ಳ್ಯಾ ವಾಟೆನ್ ಪವಿತ್ರ್ ಕರುಂದಿತ್ ಅನಿ ತುಮ್ಚೊ ಆತ್ಮೊ, ಜಿವ್, ಆಂಗ್ ಸಗ್ಳ್ಯಾ ವಾಯ್ಟಾನಿತ್ನಾ ರಾಕುನ್ ಜೆಜು ಕ್ರಿಸ್ತಾಚ್ಯಾ ಯೆನ್ಯಾಕ್ ತಯಾರ್ ಕರುನ್ ಥಂವ್ದಿತ್. ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.