Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ಆ ದಿನವು ನಿಮಗೆ ಕಳ್ಳನಂತೆ ಇದ್ದಕ್ಕಿದ್ದಂತೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ತುಮಿ ಭಾವಾನು ಅನಿ ಭೆನಿಯಾನು, ತುಮಿ ಕಾಳ್ಕಾತ್ ನಾಸಿ, ತೆಚೆಸಾಟ್ನಿ ಹ್ಯಾ ಧನಿಯಾಚ್ಯಾ ದಿಸಾನ್ ಚೊರಾ ಸಾರ್ಕೆ ಯೆವ್ನ್ ತುಮ್ಕಾ ನಾಸ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:4
17 ತಿಳಿವುಗಳ ಹೋಲಿಕೆ  

ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.


ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:


ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.


ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು