Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದಲ್ಲದೆ ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:14
20 ತಿಳಿವುಗಳ ಹೋಲಿಕೆ  

“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.


“ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.


ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.


ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.


ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.


ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.


ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು.


ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು